ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) -ಧಾರವಾಡ

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ

ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆ

Home » SakalBharati Kannada Fonts.zip

ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು ದಿನಾಂಕ: 02.03.2018 ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅರ್ಹತೆ ಹಾಗೂ ಚಿಕಿತ್ಸಾ ಮೊತ್ತ

ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಚಿಕಿತ್ಸೆಗಳು

ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?

ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. 

ಆರೋಗ್ಯ ಕಾರ್ಡ್

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿ-ಎಆರ್ಕೆ ಕಾರ್ಡ್ ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ.10/- ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್ ಕರ್ನಾಟಕ ಒನ್ ಮತ್ತು ಸೇವ ಸೀಂಧು ಕೇಂದ್ರಗಳಲ್ಲಿ ರೂ. 35/- ಶುಲ್ಕದೊಂದಿಗೆ ಎಬಿ-ಎಆರ್ಕೆ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಗಳನ್ನು ಹಾಜರು ಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು.

ನೋಂದಾಯಿತ ಆಸ್ಪತ್ರೆಗಳ ಮಾಹಿತಿ

ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು ಹಾಗೂ ಸಂಬಂಧಿಸಿದ ಆಸ್ಪತ್ರೆಯ ಆರೋಗ್ಯ ಮಿತ್ರರ ಮೊಬೈಲ್ ಸಂಖ್ಯೆ ಪಡೆದುಕೊಂಡು ಅವರನ್ನು ಸಂಪರ್ಕಿಸಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕಟಿಸಿರುವ ಸಮೀಪದ ನೊಂದಾಯಿತ ಆಸ್ಪತ್ರೆಗಳ ಪಟ್ಟಿಯನ್ನು ನೋಡಬಹುದು.

ಅನುದಾನ ಹಂಚಿಕೆ ವಿವರ:

"ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ" ಯೋಜನೆಯಡಿಯಲ್ಲಿ ರಾಜ್ಯದ 115 ಲಕ್ಷ (ಬಿಪಿಎಲ್) ಕುಟುಂಬಗಳ ಪೈಕಿ 62 ಲಕ್ಷ ಕುಟುಂಬಗಳಿಗೆ (ಅರ್.ಎಸ್.ಬಿ.ವೈ ನೋಂದಾಯಿತ) ಮಾತ್ರ ಕೇಂದ್ರ ಸರ್ಕಾರವು ಶೇ.60 ರಷ್ಟು ಅನುದಾನ ಭರಿಸುತ್ತದೆ. ರಾಜ್ಯ ಸರ್ಕಾರವು ಶೇ.40 ರಷ್ಟು ಅನುದಾನ ಭರಿಸುತ್ತದೆ. ಇನ್ನುಳಿದ 53 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ.100 ರಷ್ಟು ವೆಚ್ಚ ಭರಿಸುತ್ತದೆ. ಸಾಮಾನ್ಯ ವರ್ಗದ 19 ಲಕ್ಷ ಕುಟುಂಬಗಳಿಗೂ ಸಹ ರಾಜ್ಯ ಸರ್ಕಾರವೇ ಶೇ.100 ರಷ್ಟು ಅನುದಾನ ಭರಿಸುತ್ತದೆ.

ಸೌಲಭ್ಯ ಹಾಗೂ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು

ಹತ್ತಿರದ ಸರ್ಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು,

ಸಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು,

ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು,

ಆರೋಗ್ಯ ಸಹಾಯವಾಣಿ 104, ಟೋಲ್ ಫ್ರೀ ಸಂಖ್ಯೆ: 1800 425 8330

×
ABOUT DULT ORGANISATIONAL STRUCTURE PROJECTS